ಮುಖ್ಯಾಂಶಗಳು: -ಪ್ರದೋಷ್ ವಿಚಾರಣೆಗೆ ತಡೆ ಇಲ್ಲ: ದರ್ಶನ್ ಪರ ಮೆಮೋ ವಜಾ – ಮಾಫಿ ಸಾಕ್ಷಿ ಹೇಳಿಕೆ ದಾಖಲಿಸಲು ಕೋರ್ಟ್ ಮುಂದುವರಿಕೆ – ಹೈಕೋರ್ಟ್ ಬಳಿಕ ವಿಚಾರಣಾ ನ್ಯಾಯಾಲಯದಲ್ಲೂ ದರ್ಶನ್‌ಗೆ ಹಿನ್ನಡೆ – ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ಹೇಳಿಕೆ ದಾಖಲು ಆರಂಭ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ನ್ಯಾಯಾಲಯದಿಂದ ಮತ್ತೊಂದು ಹಿನ್ನಡೆ. ಪ್ರದೋಷ್ ರಾವ್ ಅವರ ಮಾಫಿ ಸಾಕ್ಷಿ ವಿಚಾರಣೆಗೆ ತಡೆ ನೀಡುವಂತೆ ದರ್ಶನ್ ಪರ ವಕೀಲರು ಸಲ್ಲಿಸಿದ್ದ ಮೆಮೋವನ್ನು ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯ ವಜಾಗೊಳಿಸಿದೆ ಮಾಡಿದೆ. ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯಾಗಿ ಅಂಗೀಕರಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಆ ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಸಮಯ ಬೇಕು; ಅಲ್ಲಿಯವರೆಗೆ ಪ್ರದೋಷ್ ಹೇಳಿಕೆ ದಾಖಲಿಸಬಾರದು ಎಂದು ದರ್ಶನ್ ಪರ ವಕೀಲರು ಕೋರಿದ್ದರು. ಸುಪ್ರೀಂಕೋರ್ಟ್‌ಗೆ ಹೋಗುವ ಹಕ್ಕು ಆರೋಪಿಗಳಿಗೆ ಇದೆ. ಆದರೆ ಸದ್ಯಕ್ಕೆ ವಿಚಾರಣೆಯನ್ನು ತಡೆಯಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಬಳಿಕ ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಆರಂಭವಾಗಿದೆ. ದರ್ಶನ್ ಮತ್ತು ಪವಿತ್ರಾ ಗೌಡ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ ಎಂದು ವರದಿಯಾಗಿದೆ. ಮುಂದಿನ ಪ್ರಕ್ರಿಯೆ ಸುಪ್ರೀಂಕೋರ್ಟ್‌ನ ಯಾವುದೇ ಆದೇಶಕ್ಕೆ ಒಳಪಟ್ಟಿರುತ್ತದೆ. Post navigation ಬಿಗ್ ಬಾಸ್ಗೆ ‘ಘಾಟಿ ಗಾನವಿ’ ಎಂಟ್ರಿ..! ಕನ್ನಾಳೆ ಡೈರಿಯಲ್ಲಿ ಬಾಕಿ ಹಣದ ಲೆಕ್ಕ?